ವೇಣುನಾದ ಬಾರೋ
ವೇಣುನಾದ ಬಾರೋ ವೆಂಕಟರಮಣನೆ ಬಾರೋ
ಬಾಣನ ಭಂಗಿಸಿದಂಥ ಭಾವಜನಯ್ಯನೆ ಬಾರೋ
ಬಾಣನ ಭಂಗಿಸಿದಂಥ ಭಾವಜನಯ್ಯನೆ ಬಾರೋ ಬಾರೋ ಬಾರೋ
ವೇಣುನಾದ ಬಾರೋ ವೆಂಕಟರಮಣನೆ ಬಾರೋ
ಬಿಲ್ಲ ಮುರಿದು ಮಲ್ಲರ ಗೆದ್ದ ಪುಲ್ಲನಾಭನೆ ಬಾರೋ
ಗೊಲ್ಲತೇರೊಡನೆ ನಲಿವ ಚೆಲುವ ಮೂರುತಿ ಬಾರೋ
ಗೊಲ್ಲತೇರೊಡನೆ ನಲಿವ ಚೆಲುವ ಮೂರುತಿ ಬಾರೋ ಬಾರೋ ಬಾರೋ
ಮಂದರಗಿರಿ ಎತ್ತಿದಂಥ ಇಂದಿರೆ ರಮಣನೆ ಬಾರೋ
ಕುಂದದೆ ಗೋವುಗಳ ಕಾಯಿದ ಪುಂಡರೀಕಾಕ್ಷನೆ ಬಾರೋ
ಕುಂದದೆ ಗೋವುಗಳ ಕಾಯಿದ ಪುಂಡರೀಕಾಕ್ಷನೆ ಬಾರೋ ಬಾರೋ ಬಾರೋ
ಶೇಷಶಯನ ಮೂರುತಿಯಾದ ವಾಸುದೇವನೆ ಬಾರೋ
ದಾಸರೊಳು ದಾಸನಾದ ಪುರಂದರವಿಠಲನೆ ಬಾರೋ
ದಾಸರೊಳು ದಾಸನಾದ ಪುರಂದರವಿಠಲನೆ ಬಾರೋ ಬಾರೋ ಬಾರೋ
******************************************************************************