ಅಲ್ಲಿದೆ ನಮ್ಮ ಮನೆ

ಅಲ್ಲಿದೆ ನಮ್ಮ ಮನೆ ಇಲ್ಲಿರುವುದು ಸುಮ್ಮನೆ

ಕದಬಾಗಿಲಿರಿಸಿದ ಕಳ್ಳ ಮನೆಇದು
ಮುದದಿಂದಲೋಡ್ಯಾಡೋ ಸುಳ್ಳು ಮನೆ
ಇದಿರಾಗಿ ವೈಕುಂಠ ವಾಸಮಾಡುವಂತ
ಪದುಮನಾಭನ ದಿವ್ಯ ಬದುಕುಮನೆ

ಮಾಳಿಗೆಮನೆಯೆಂದು ನೆಚ್ಚಿಕೆಡಲುಬೇಡ
ಕೇಳಯ್ಯ ಹರಿಕಥೆಶ್ರವಣಂಗಳ
ನಾಳೆ ಯಮದೂತರು ಬಂದೆಳೆದೊಯ್ವಾಗ
ಮಾಳಿಗೆ ಮನೆ ಸಂಗಡ ಬಾರದಯ್ಯ

ಮಡದಿಮಕ್ಕಳು ಎಂಬ ಹಂಬಲ ನಿನಗೇಕೋ
ಕಡುಗೊಬ್ಬುತನದಿ ನಡೆಯದಿರು
ಒಡೆಯ ಶ್ರೀ ಪುರಂದರ ವಿಠಲನ ಚರಣ
ದೃಢಭಕ್ತಿಯಲಿ ನೀ ನೆನೆಸಿಕೊ ಮನುಜ


************************************************************