ಎಂಥ ಅಂದ ಎಂಥ ಚಂದ ಶಾರದಮ್ಮ

ಎಂಥ ಅಂದ ಎಂಥ ಚಂದ ಶಾರದಮ್ಮ 
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ

ಇನ್ನು ಇನ್ನು ನೋಡುವಾಸೆ ತುಂಬಿತಮ್ಮ
ಇನ್ನು ಕೋಟಿ ಜನುಮ ಬರಲಿ ನನಗೆ ಸಾಲದಮ್ಮ

ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ
ನಿನ್ನ ಪಾದಕಮಲದಲ್ಲಿ ಶಿರವು ಬಾಗಿತಮ್ಮ

ಎಂಥ ಅಂದ ಎಂಥ ಚಂದ ಶಾರದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ

ಎಂಥ ಶಕ್ತಿ ನಿನ್ನಲಿದೆಯೊ ಶಾರದಮ್ಮ
ನಿನ್ನ ನೋಡಿ ಹಾಡುವಾಸೆ ನನಗೆ ಬಂದಿತಮ್ಮ

ರತ್ನದಂತ ಮಾತುಗಳನೆ ಹಾಡಿಸಮ್ಮ
ಒಳ್ಳೆ ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ

ಎಂಥ ಅಂದ ಎಂಥ ಚಂದ ಶಾರದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ

ಅಲ್ಲಿ ಇಲ್ಲಿ ಓಡೋ ಮನಸು ನನ್ನದಮ್ಮ
ಬೇಗ ಬಂದು ನೆಲೆಸು ಇಲ್ಲಿ ಶಾರದಮ್ಮ

ಬೇರೆ ಏನು ಬೇಕು ಎಂದು ಕೇಳೆನಮ್ಮ
ನಿನ್ನ ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ

ಎಂಥ ಅಂದ ಎಂಥ ಚಂದ ಶಾರದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ

***********************************************************************