ಹಕ್ಕಿಯ ಹೆಗಲೇರಿ

ಹಕ್ಕಿಯ ಹೆಗಲೇರಿ ಬಂದವಗೆ
ನೋಡಕ್ಕ ಮನಸೋತೆ ನಾನವಗೆ

ಸತ್ರಾಜಿತನ ಮಗಳೆತ್ತಿದ ಉನ್ಮತ್ತ ನರಕನೊಳು ತಾ ಕಾದಿದ
ಮತ್ತೆ ಕೆಡಹಿದ ಅವನಂಗವ ಸತಿಗಿತ್ತನು ತಾ ಆಲಿಂಗನವ

ಹಕ್ಕಿಯ ಹೆಗಲೇರಿ ಬಂದವಗೆ
ನೋಡಕ್ಕ ಮನಸೋತೆ ನಾನವಗೆ

ಹದಿನಾರು ಸಾವಿರ ನಾರಿಯರ ಸೆರೆ ಮುದದಿಂದ ಬಿಡಿಸಿ ಮನೋಹರ
ಅದಿತಿಯ ಕುಂಡಲ ಕಳಿಸಿದ ಹರಿ ವಿಧಿಸುರನೃಪರನು ಸಲಹಿದ ದೇವ

ಹಕ್ಕಿಯ ಹೆಗಲೇರಿ ಬಂದವಗೆ
ನೋಡಕ್ಕ ಮನಸೋತೆ ನಾನವಗೆ

ನರಕಚತುರ್ದಶಿ ಪರ್ವದ ದಿನ ಹರುಷದಿ ವ್ರಕಟಾದನು ದೇವ
ಶರಣಾಗತಜನ ವತ್ಸಲಾ ರಂಗ ಪರಮ ಭಾಗವತರ ಪರಿಪಾಲ

ಹಕ್ಕಿಯ ಹೆಗಲೇರಿ ಬಂದವಗೆ
ನೋಡಕ್ಕ ಮನಸೋತೆ ನಾನವಗೆ

ಹೊಗಳಿ ಕೃಷ್ಣಯ್ಯನ ಮಹಿಮೆಯ ಮುಕ್ತಿ ನಗರದ ಅರಸನ ಕೀರ್ತಿಯಾ
ಜಗದೀಶ ಪ್ರಸನ್ವೆಂಕಟೇಶನು ಭಕ್ತ ರವಿ ಕೋಟಿ ತೇಜಪ್ರಕಾಶನು

ಹಕ್ಕಿಯ ಹೆಗಲೇರಿ ಬಂದವಗೆ
ನೋಡಕ್ಕ ಮನಸೋತೆ ನಾನವಗೆ

***********************************************************************