ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಅಕಳಂಕಚರಿತ ಮಕರಕುಂಡಲಧರ
ಸಕಲರ ಪಾಲಿಪ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಅರಳೆಲೆಮಾಗಾಯಿ ಕೊರಳ ಮುತ್ತಿನ ಸರ
ತರಳೆಯರೊಡಗೂಡಿ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಅಂದುಗೆ ಅರಳೆಲೆ ಬಿಂದುಲ್ಲಿ ಬಾಪುರಿ
ಚೆಂದದಿ ನಲಿಯುತ್ತ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಉಟ್ಟ ಪಟ್ಟೆಯ ದಟ್ಟಿ ಇಟ್ಟ ಕಾಂಚಿಯ ಧಾಮ
ದಿಟ್ಟ ಮಲ್ಲರ ಗಂಡ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಪರಮಭಾಗವತರ ಕೇರಿಯೊಳಾಡುವ
ಪುರಂದರವಿಠಲ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ
ಹರಿ ಕುಣಿದಾ ನಮ್ಮ ಹರಿ ಕುಣಿದಾ