ಇಟ್ಠಾಂಗೆ ಇರುವೆನೋ
ಇಟ್ಠಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ
ಸೃಷ್ಟಿವಂದಿತ ಪಾದಪದುಮ ಶ್ರೀಹರಿಯೇ
ಕಂಪಿಲಿ ಪೊಳೆವ ಪೀತಾಂಬರ ಉಡಿಸುವಿ
ಸೊಂಪಿನಂಚಿನ ಶಾಲು ಹೊದಿಸುವಿಯೋ
ಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆ
ಕಪರ್ದಕ ಕೌಪೀನವು ದೊರೆಯದೊ ಹರಿಯೇ
ಇಟ್ಠಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ
ಸೃಷ್ಟಿವಂದಿತ ಪಾದಪದುಮ ಶ್ರೀಹರಿಯೇ
ಗಂಗಾಜನಕ ಪಾಂಡುರಂಗ ನಿನ್ನಯ ಭಕ್ತರ
ಸಂಗವಿರಲಿ ದುಷ್ಟಸಂಗ ಬ್ಯಾಡ
ಅಂಗನೆಯರ ಕೂಡಿ ಅನಂಗಬಾಣಕೆ ಸಿಲುಕಿ
ಭಂಗವ ಪಡಲಾರೆ ಶ್ರೀರಂಗವಿಠಲ ಹರಿಯೇ
ಇಟ್ಠಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ
ಸೃಷ್ಟಿವಂದಿತ ಪಾದಪದುಮ ಶ್ರೀಹರಿಯೇ