ಜಗದೋದ್ಧಾರನ

ಜಗದೋದ್ಧಾರನ ಆಡಿಸಿದಳೆಶೋದಾ
ಜಗದೋದ್ಧಾರನ

ಜಗದೋದ್ಧಾರನ ಮಗನೆಂದು ತಿಳಿಯುತ
ಸುಗುಣಾಂತ ರಂಗನ ಆಡಿಸಿದಳೆಶೋದೆ

ಜಗದೋದ್ಧಾರನ ಆಡಿಸಿದಳೆಶೋದಾ
ಜಗದೋದ್ಧಾರನ

ನಿಗಮಕೆ ಸಿಲುಕದ ಅಗಣಿತ ಮಹಿಮನ
ಮಗುಗಳ ಮಾಣಿಕ್ಯನ ಆಡಿಸಿದಳೆ ಯಶೋದೆ

ಜಗದೋದ್ಧಾರನ ಆಡಿಸಿದಳೆಶೋದಾ
ಜಗದೋದ್ಧಾರನ

ಅಣೋರಣೀಯನ ಮಹತೋ ಮಹಿಮನ
ಅಪ್ರಮೇಯನ ಆಡಿಸಿದಳೆಶೋದಾ

ಜಗದೋದ್ಧಾರನ ಆಡಿಸಿದಳೆಶೋದಾ
ಜಗದೋದ್ಧಾರನ

ಪರಮ ಪುರುಷನ ಪರವಾಸುದೇವನ
ಪುರಂದರ ವಿಠಲನ ಆಡಿಸಿದಳೆಶೋದಾ


******************************************************