ರಾಘವೇಂದ್ರ ರಾಘವೇಂದ್ರ

ರಾಘವೇಂದ್ರ ರಾಘವೇಂದ್ರ ರಾಘವೇಂದ್ರ ಎನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

ತಂದೆ ತಾಯಿ ಬಂಧು ಬಳಗ ಎಲ್ಲ ನೀನೆ ಎನ್ನಿರಿ
ನಾನು ಎಂಬ ಮೋಹ ಮರೆತು ಎಂದೂ ಅವನ ನಂಬಿರಿ
ಹೇಗೆ ಇರಲಿ ಎಲ್ಲೆ ಇರಲಿ…ಅವನ ಸ್ಮರಣೆ ಮಾಡಿರಿ….
ಧ್ಯಾನದಿಂದ ಮನವ ಸುಡುವ ಚಿಂತೆ ದೂರ ಮಾಡಿರಿ

ರಾಘವೇಂದ್ರ ರಾಘವೇಂದ್ರ ರಾಘವೇಂದ್ರ ಎನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

ಮಾನ ಪ್ರಾಣ ಧನವು ಎಲ್ಲ ಸ್ವಾಮಿ ನಿನ್ನದೆನ್ನಿರಿ
ಗುರುವೆ ನಿನ್ನ ಕರುಣೆಯೊಂದೆ ಸಾಕು ನನಗೆ ಎನ್ನಿರಿ
ಕಲ್ಲು ಮುಳ್ಳೊ ಸಿಡಿಲೊ ಮಳೆಯೊ ಅವನ ಕರುಣೆಯೆನ್ನಿರಿ
ಏನೇ ಬರಲಿ ಅವನದೆಂದು ನಂಬಿ ಮುಂದೆ ನಡೆಯಿರಿ

ರಾಘವೇಂದ್ರ ರಾಘವೇಂದ್ರ ರಾಘವೇಂದ್ರ ಎನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

ನಿಮ್ಮ ಮನೆಯ ನಿಮ್ಮ ಮನದ ವಿಷಯವೆಲ್ಲ ಬಲ್ಲನು
ಚಪಲದಿಂದ ಅಲೆವ ಮನದಲೆಂದು ಗುರುವು ನಿಲ್ಲನು
ಕೊಡುವುದೆಲ್ಲ ಕೊಡುವನವನು ಇನ್ನು ಆಸೆಯೇತಕೆ
ಕಲ್ಪವೃಕ್ಷದಂತೆ ಗುರುವು ಇರಲು ಚಿಂತೆಯೇತಕೆ

ರಾಘವೇಂದ್ರ ರಾಘವೇಂದ್ರ ರಾಘವೇಂದ್ರ ಎನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

“ಪೂಜ್ಯಾಯ ರಾಘವೇಂದ್ರಾಯ, ಸತ್ಯಧರ್ಮವ್ರತಾಯಚ
ಭಜತಾಂ ಕಲ್ಪವೃಕ್ಷಾಯ, ನಮತಾಂ ಕಾಮಧೇನುವೆ………"

********************************************************************